ದಾನಿಯೇಲ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನಿಗೆ ನಿದ್ರೆ ತಪ್ಪಿತು. ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿಸಲೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು. ಅಧ್ಯಾಯವನ್ನು ನೋಡಿ |
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.