Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:28
32 ತಿಳಿವುಗಳ ಹೋಲಿಕೆ  

ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು