Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ರಾಜನೇ, ನೀನು ಕಂಡದು ಆಹಾ, ಅದ್ಭುತ ಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:31
11 ತಿಳಿವುಗಳ ಹೋಲಿಕೆ  

ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.


ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,


ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.


“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.


ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು