Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:37
32 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,


ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು