ದಾನಿಯೇಲ 2:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೀನೇ ಆ ಬಂಗಾರದ ತಲೆ. ನಿನ್ನ ಕಾಲವಾದ ಮೇಲೆ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯವುಂಟಾಗುವದು; ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು. ಅಧ್ಯಾಯವನ್ನು ನೋಡಿ |