ದಾನಿಯೇಲ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!