ದಾನಿಯೇಲ 2:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
40 “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
40 ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದಷ್ಟೆ; ಸಕಲವನ್ನೂ ದ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ದ್ವಂಸಮಾಡುವದು.
40 ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.
40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.