Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:44
38 ತಿಳಿವುಗಳ ಹೋಲಿಕೆ  

ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು