Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:45
32 ತಿಳಿವುಗಳ ಹೋಲಿಕೆ  

ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.


ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.


ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.


ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು