Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು ದಾನಿಯೇಲನನ್ನು ಪೂಜಿಸಿ ಅವನಿಗೆ ನೈವೇದ್ಯ ಮಾಡಿ ಧೂಪಹಾಕಬೇಕೆಂದು ಆಜ್ಞಾಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:46
12 ತಿಳಿವುಗಳ ಹೋಲಿಕೆ  

ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.


ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು,


ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.


ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.


ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು