Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:47
34 ತಿಳಿವುಗಳ ಹೋಲಿಕೆ  

ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,


ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.


“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.


ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.


ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು