ದಾನಿಯೇಲ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.
6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -
6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.
6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.