Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:11
6 ತಿಳಿವುಗಳ ಹೋಲಿಕೆ  

ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.


ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.


ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು