ದಾನಿಯೇಲ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ; ರಾಜನೇ, ಇವರು ನಿನ್ನನ್ನು ಲಕ್ಷಿಸುವದಿಲ್ಲ, ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದು ಅರಿಕೆಮಾಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.