ದಾನಿಯೇಲ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |