Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:18
20 ತಿಳಿವುಗಳ ಹೋಲಿಕೆ  

ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.


ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.


ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು