ದಾನಿಯೇಲ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎದ್ದುನಿಂತನು. ಅವನು ಆಶ್ಚರ್ಯಚಕಿತನಾಗಿ ತನ್ನ ಮಂತ್ರಿಗಳನ್ನು, “ನಾವು ಕೇವಲ ಮೂರು ಜನರನ್ನು ಕಟ್ಟಿದೆವು, ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಹೌದಲ್ಲವೇ?” ಎಂದು ಕೇಳಿದನು. ಅವನ ಮಂತ್ರಿಗಳು, “ಹೌದು, ಮಹಾರಾಜನೇ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿ |