Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:25
20 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.


ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.


ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.


ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.


ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು