ದಾನಿಯೇಲ 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು. ಅಧ್ಯಾಯವನ್ನು ನೋಡಿ |