ದಾನಿಯೇಲ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ ಅಧ್ಯಾಯವನ್ನು ನೋಡಿ |
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.