Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:8
14 ತಿಳಿವುಗಳ ಹೋಲಿಕೆ  

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.


ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.


ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು