ದಾನಿಯೇಲ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.