Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:13
18 ತಿಳಿವುಗಳ ಹೋಲಿಕೆ  

“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.


ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,


ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.


‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು