Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:17
30 ತಿಳಿವುಗಳ ಹೋಲಿಕೆ  

ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.


“ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು