ದಾನಿಯೇಲ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು. ಅಧ್ಯಾಯವನ್ನು ನೋಡಿ |