Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಕನಸಿನ ಅರ್ಥವು ಹೀಗಿದೆ: ಅರಸನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ಅರಸನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:24
14 ತಿಳಿವುಗಳ ಹೋಲಿಕೆ  

ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”


ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು