Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:27
44 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.


ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು