ದಾನಿಯೇಲ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು. ಅಧ್ಯಾಯವನ್ನು ನೋಡಿ |