Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದ. ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದ. ಅವನ ಕೂದಲು ಹದ್ದುಗಳ ರೆಕ್ಕೆಗಳಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನಂತೆಯೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:33
7 ತಿಳಿವುಗಳ ಹೋಲಿಕೆ  

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.


ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.


ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು