ದಾನಿಯೇಲ 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
34 ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
34 ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.
34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;
34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.
34 ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.