ದಾನಿಯೇಲ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!