Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಸನ್ನಿಧಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:8
14 ತಿಳಿವುಗಳ ಹೋಲಿಕೆ  

ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.


ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.


ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?


ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು