ದಾನಿಯೇಲ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿ |