ದಾನಿಯೇಲ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೌದು, ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ ಜ್ಞಾನವೂ ವಿವೇಕವೂ ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ ಒಗಟುಬಿಡಿಸುವ ಚಮತ್ಕಾರವೂ ಗುಂಜುಗಂಟುಬಿಚ್ಚುವ ಚಾತುರ್ಯವೂ ತೋರಿಬಂದದರಿಂದಲೇ ಹಾಗೆ ನೇವಿುಸಿದನು. ಈಗ ಈ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು. ಅಧ್ಯಾಯವನ್ನು ನೋಡಿ |
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!