Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:15
6 ತಿಳಿವುಗಳ ಹೋಲಿಕೆ  

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು