ದಾನಿಯೇಲ 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ದಾನಿಯೇಲನು ಸನ್ನಿಧಿಯಲ್ಲಿ - ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ; ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |