ದಾನಿಯೇಲ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.