ದಾನಿಯೇಲ 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು. ಅಧ್ಯಾಯವನ್ನು ನೋಡಿ |