ದಾನಿಯೇಲ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ. ಅಧ್ಯಾಯವನ್ನು ನೋಡಿ |