Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:28
16 ತಿಳಿವುಗಳ ಹೋಲಿಕೆ  

ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.


ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.


ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,


ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.


ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.


ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.


ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,


“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು