ದಾನಿಯೇಲ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗಲೇ ಒಬ್ಬನ ಕೈಯ ಬೆರಳುಗಳು ಬಂದು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರಹ ಬರೆದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. ಅಧ್ಯಾಯವನ್ನು ನೋಡಿ |