ದಾನಿಯೇಲ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.