Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:13
9 ತಿಳಿವುಗಳ ಹೋಲಿಕೆ  

ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.


ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?


ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.


ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.


ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.


ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು


“ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು