Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:16
28 ತಿಳಿವುಗಳ ಹೋಲಿಕೆ  

ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.


ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.


ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು