Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು; ದಾನಿಯೇಲನ ಗತಿಯು ಬೇರೆಯಾಗದಂತೆ ರಾಜನು ತನ್ನ ಮುದ್ರೆಯಿಂದಲೂ ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮೊಹರುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:17
7 ತಿಳಿವುಗಳ ಹೋಲಿಕೆ  

ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು


ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು