Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾಜನಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇವಿುಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:2
14 ತಿಳಿವುಗಳ ಹೋಲಿಕೆ  

ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.


ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.


ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.


ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು