Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:20
30 ತಿಳಿವುಗಳ ಹೋಲಿಕೆ  

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.


‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.


ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,


ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.


ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು