Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:22
37 ತಿಳಿವುಗಳ ಹೋಲಿಕೆ  

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,


ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.


ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು