ದಾನಿಯೇಲ 6:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು. ಅಧ್ಯಾಯವನ್ನು ನೋಡಿ |