Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:25
14 ತಿಳಿವುಗಳ ಹೋಲಿಕೆ  

ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.


ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.


ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.


ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು